ಕನ್ನಡದ ಜನಮಾನಸದ ಜನಪ್ರಿಯ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮಾರ್ಚ್ 22ರ ಮಂಗಳವಾರ ನಡೆದ ತನ್ನ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ವಿವಿಯ ಕುಲಾಧಿಪತಿ ಹಾಗೂ ಕುಲಪತಿಗಳು ಭಾಗವಹಿಸಿದ್ದ ಘಟಿಕೋತ್ಸವದಲ್ಲಿ ಪುನೀತ್ ರಾಜ್ ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.


ಗೌರವ ಸ್ವೀಕರಿಸಿದ ಬಳಿಕ ಮೈಸೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ವರ್ಷದಿಂದ ಪಾರ್ವತಮ್ಮ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜ್ಕುಮಾರ್ ಘೋಷಣೆ ಮಾಡಿದ್ದಾರೆ.
ಎಂಬಿಎ ಪದವಿಗೆ ಪಾರ್ವತಮ್ಮ ರಾಜ್ಕುಮಾರ್ ಹೆಸರಿನಲ್ಲಿ ಹಾಗೂ ಲಲಿತಕಲಾ ವಿಭಾಗದ ಸಾಧನೆಗೆ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಚಿನ್ನದ ಪದಕ ನೀಡಲಾಗುವುದೆಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಕಟಿಸಿದ್ದಾರೆ.
ಮೈಸೂರು ವಿವಿಯ ಈ ಘಟಿಕೋತ್ಸವ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಸಹ ಭಾಗವಹಿಸಿದ್ದರು.
