Snehapriya.com

June 8, 2025

ಆರ್ ಆರ್ ಆರ್ ಬಿಡುಗಡೆಗೆ ಹೊಸ ದಿನಾಂಕ-ಮಾರ್ಚ್ ಗೆ ತೆರೆಗೆ ಸಾಧ್ಯತೆ

Social Share :

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಹೆಸರಾಂತ ನಿರ್ದೇಶಕ ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ಬಿಡುಗಡೆಗೆ ಹೊಸ ದಿನಾಂಕ‌‌ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜನವರಿ 7ರಂದು ಬಿಡುಗಡೆ ಕಾಣಬೇಕಿತ್ತು. ಆದರೆ ಕೊರೊನಾ ಮಹಾಮಾರಿಯ ಅಬ್ಬರದಿಂದ ಉಂಟಾದ ಕಠಿಣ ನಿಯಮಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು.

ಆದರೆ ಇದೀಗ ನಿಯಮಗಳ ಸಡಿಲಿಕೆ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಗೆ ತಂಡ ಸಿದ್ದತೆ ಮಾಡಿಕೊಂಡಿದೆ. ಐದು ಭಾಷೆಗಳಲ್ಲಿ ತೆರೆಗೆ ಬರಲು ಸಜ್ಜಾಗಿರುವ ಚಿತ್ರಕ್ಕೆ ಬೇರೆ ಬೇರೆ ರಾಜ್ಯಗಳ ಕೊರೊನಾ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ದೊರೆಯಬೇಕಾಗಿದೆ.

ಹಾಗಾಗಿ ಚಿತ್ರತಂಡ ಎರಡು ದಿನಾಂಕಗಳನ್ನು ನಿಗದಿಪಡಿಸಿದೆ. ಅದರಲ್ಲಿ ಒಂದು ಮಾರ್ಚ್ 18 ಮತ್ತು ಇನ್ನೊಂದು ಏಪ್ರಿಲ್ 28. ಸದ್ಯದ ಪರಿಸ್ಥಿತಿಯಲ್ಲಿ ಚಿತ್ರಮಂದಿರಗಳ ಆಸನ ವ್ಯವಸ್ಥೆಯಲ್ಲಿ ಶೇಕಡ 50 ರಷ್ಟು ಮಾತ್ರ ತುಂಬುವುದಕ್ಕೆ ಅವಕಾಶ ಇದೆ. ಆದರೆ ಮಾರ್ಚ್ 18ಕ್ಕೆ ಪೂರ್ಣ ಆಸನ ವ್ಯವಸ್ಥೆ ಸಾಧ್ಯವಾದಲ್ಲಿ ಮಾತ್ರ ಚಿತ್ರವು ಬಿಡುಗಡೆ ಕಾಣುತ್ತದೆ. ಇಲ್ಲವೇ ಏಪ್ರಿಲ್ 28ರವರೆಗೆ ಸಹ ಕಾಯಲು ಚಿತ್ರತಂಡ ನಿರ್ಧರಿಸಿದೆ.

ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟಿ ಆಲಿಯಾ ಭಟ್​ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಅಜಯ್​ ದೇವಗನ್​ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಕಾಣುತ್ತಿರುವ ಚಿತ್ರವನ್ನು ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡುತ್ತಿದೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *