ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್
80ರ ದಶಕದ ಭೂಗತ ಜಗತ್ತಿನ ಘಟನಾವಳಿಗಳನ್ನು ಆಧರಿಸಿದ ಚಿತ್ರ ‘ಹೆಡ್ ಬುಷ್’ ಚಿತ್ರೀಕರಣ ಪೂರ್ಣಗೊಳಿಸಿದೆ.
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ ‘ಹೆಡ್ ಬುಷ್’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದ್ದು, ಡಾಲಿ ಧನಂಜಯ್ಯ ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಆ ದಿನಗಳು’, ‘ಎದೆಗಾರಿಕೆ’ ಚಿತ್ರಗಳ ಕ್ಲಾಸಿಕ್ ನೆಲೆಗೆ ಕಾರಣಕರ್ತರಾಗಿದ್ದ ಅಗ್ನಿ ಶ್ರೀಧರ್ ಈ ಚಿತ್ರಕ್ಕೂ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಶೂನ್ಯ ಈ ಚಿತ್ರದ ನಿರ್ದೇಶಕ. 1970 ರ ದಶಕದ ಬೆಂಗಳೂರಿನ ಭೂಗತ ಜಗತ್ತನ್ನು ಪರಿಚಯಿಸಲು ಶೂನ್ಯ ಹೊರಟಿದ್ದಾರೆ.
ಅಚ್ಚರಿ ಎಂದರೆ 70-80ರ ದಶಕದ ಬೆಂಗಳೂರು ಹೇಗಿತ್ತು ಎಂಬುದಕ್ಕೆ ಅದ್ಭುತ ಸೆಟ್ ಗಳನ್ನು ಹಾಕಲಾಗಿದೆ. ಹೆಸರಾಂತ ಕಲಾವಿದ ಬಾದಲ್ ನಂಜುಂಡಸ್ವಾಮಿ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.
ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.
ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.