ಅಕ್ಷಿತ್ ಶಶಿಕುಮಾರ್ ಮುಖ್ಯ ಪಾತ್ರದಲ್ಲಿರುವ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ.
ಚಿತ್ರದ ಹಾಡುಗಳು ಹಿಟ್ ಆಗಿ ಮಿಲಿಯನ್ ಗಟ್ಟಲೆ ವೀಕ್ಷಕರನ್ನು ತಲುಪಿರುವ ಸಂದರ್ಭದಲ್ಲಿ ಖುಷಿಯಿಂದ ಬೀಗುತ್ತಿರುವ ತಂಡ ಚಿತ್ರದ ಬಿಡುಗಡೆಗೆ ಸಜ್ಜಾಗಿದೆ.
ಅಕ್ಷಿತ್ ಶಶಿಕುಮಾರ್ ಜೊತೆ ಕೀರ್ತಿ ಕಲ್ಕೆರೆ ನಟಿಸಿದ್ದಾರೆ. ಜಿ.ಸಿ.ಬಿ ಬ್ಯಾನರ್ ನ ಅಡಿ ಜಿ.ರಾಮಾಂಜಿನಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಈ ಹಿಂದೆ ರಿಯಲ್ ಸ್ಟಾರ್ ಉಪೇಂದ್ರ ಚಿತ್ರದ ಮೊದಲ ಹಾಡನ್ನು ಅನಾವರಣಗೊಳಿಸಿದ್ದರು. ಅದರ ಬಳಿಕ ಚಿತ್ರದ ಟೀಸರ್ ವೀಕ್ಷಿಸಿದ ತೆಲುಗು ಚಿತ್ರರಂಗದ ಚಿತ್ರಬ್ರಹ್ಮ ಕೆ.ರಾಘವೇಂದ್ರರಾವ್ ಮೆಚ್ಚುಗೆ ವ್ಯಕ್ತ ಪಡಿಸಿ ನಿರ್ದೇಶಕ ಸ್ಮೈಲ್ ಶ್ರೀನು ಕೆಲಸ ಹೊಗಳಿದ್ದರು. ನಂತರ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ‘ನಿನ್ನ ಡ್ಯಾಡಿ ನಂಗೆ…’ ಹಾಡು ಬಿಡುಗಡೆ ಮಾಡಿ ಚಿತ್ರತಂಡವನ್ನು ಹಾರೈಸಿದ್ದರು.
ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ‘ಓ ಮೈ ಲವ್’ ಗೆ ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನವಿದೆ.
ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್, ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್ , ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.