* ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ನಿರ್ದೇಶಕ – ನಿರ್ಮಾಪಕ ಆರ್ ಚಂದ್ರು..
* ರಮೇಶ್ ರೆಡ್ಡಿ ಶುಭ ಹಾರೈಕೆ..
* ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್..
ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಹುಟ್ಟುಹಬ್ಬದ ಸಲುವಾಗಿ ಅವರ ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ.
ಹೆಸರಾಂತ ನಿರ್ದೇಶಕ – ನಿರ್ಮಾಪಕ ಆರ್. ಚಂದ್ರು ಟೀಸರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಟೆರರ್ ಎಂಬ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ಚಿತ್ರ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿವೆ ಎಂದರು ಆರ್ ಚಂದ್ರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ, ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಹಾಗೂ ಇತರರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು.
ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ. ಸಿನಿಮಾದಲ್ಲಿ ಆದಿತ್ಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಶೇ. 30 ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮೇಗೌಡ ವಿವರ ನೀಡಿದರು.
ಕನ್ನಡ ಚಿತ್ರರಂಗಕ್ಕೆ ‘ಎ’ ನಂತಹ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಇದರ ನಿರ್ಮಾಪಕರು.
ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರ ತಂಡಕ್ಕೆ ಮತ್ತು ಆಗಮಿಸಿರುವ ಎಲ್ಲಾ ಗಣ್ಯರಿಗೂ ಧನ್ಯವಾದ ಅರ್ಪಿಸುವೆ ಎಂದರು ಆದಿತ್ಯ.