Snehapriya.com

June 9, 2025

ಲಾಲ್ ಸಲಾಂ ರಜನಿ ಹೊಸ ಲುಕ್

Social Share :

ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ ಚಿತ್ರದಲ್ಲಿ ತಲೈವ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಅದರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕಂಡಿದ್ದು, ರಜನಿಯ ಹೊಸ ಅವತಾರ ಅಭಿಮಾನಿಗಳ ಗಮನ ಸೆಳೆದಿದೆ.

ಮಗಳು ಐಶ್ವರ್ಯ ನಿರ್ದೇಶನದ ಲಾಲ್ ಸಲಾಂ ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಎಂಬ ಪಾತ್ರದಲ್ಲಿ ತಲೈವಾ ಕಾಣಿಸಿಕೊಳ್ಳುತ್ತಿದ್ದಾರೆ. ಶೇರ್ವಾನಿ ಉಡುಪು ಧರಿಸಿ ಸನ್‌ಗ್ಲಾಸ್ ತೊಟ್ಟು ತಲೆಗೆ ಟೋಪಿ ಹಾಕಿ ಕಾಣಿಸಿಕೊಂಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅದೇ ಸ್ಟೈಲ್ ನಿಂದ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಮುಖ್ಯ ಭೂಮಿಕೆಯಲ್ಲಿದ್ದು, ಜೀವಿತಾ ರಾಜಶೇಖರ್ ಜೊತೆಗಿದ್ದಾರೆ. ಆಸ್ಕರ್ ಪುರಸ್ಕೃತ ಎ ಆರ್ ರೆಹಮಾನ್ ಸಂಗೀತ, ವಿಷ್ಣು ರಂಗಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯ ಕಥೆ ಇದೆ.

ಇಂಡಿಯನ್, ಕೈದಿ ನಂಬರ್-150, 2.೦, ದರ್ಬಾರ್, ಪೊನ್ನಿಯಿನ್ ಸೆಲ್ವನ್ ಸರಣಿ ಸಿನಿಮಾ ನಿರ್ಮಿಸಿರುವ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹೌಸ್ ಲಾಲ್ ಸಲಾಂ ಚಿತ್ರ ನಿರ್ಮಾಣ ಮಾಡುತ್ತಿದೆ. ಸದ್ಯ ಮುಂಬೈನಲ್ಲಿ ಶೂಟಿಂಗ್ ಭರದಿಂದ ಸಾಗುತ್ತಿದೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *