ಕೊರೊನಾ ಸಮಯದಲ್ಲಿ ಮಾನವೀಯ ಅನುಕಂಪ ಮೆರೆತು ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ನಟಿ ರಾಗಿಣಿ ದ್ವಿವೇದಿ ಆನಂತರವೂ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡವರು..
ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿರುವ ತುಪ್ಪದ ಬೆಡಗಿ ರಾಗಿಣಿ ಇದೇ ಮೇ 24 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಸಮಯದಲ್ಲಿಯೂ ಸಾಮಾಜಿಕ ಕಾರ್ಯಗಳಿಗೇ ತಮ್ಮನ್ನು ಒಡ್ಡಿಕೊಳ್ಳುತ್ತಿದ್ದಾರೆ.
ಮೇ 24ರಂದು ರಾಗಿಣಿ ದ್ವಿವೇದಿ ಅಭಿಮಾನಿಗಳ ಬಳಗದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಮುಖ್ಯವಾಗಿ ಅಂದು ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ಮೇ 24 ರಂದು ಬೆ10 ರಿಂದ ಸಂಜೆ 5 ರವರೆಗೂ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿಷ್ಠಿತ ಆಸ್ಪತ್ರೆಗಳ ತಜ್ಞರು ಈ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ಆ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ರಾಗಿಣಿ ದ್ವಿವೇದಿ ಆಚರಿಸಿಕೊಳ್ಳುತ್ತಿದ್ದಾರೆ.