Snehapriya.com

June 6, 2025

ಸೆಪ್ಟೆಂಬರ್ 15ಕ್ಕೆ ಬುದ್ದಿವಂತ-2

Social Share :


ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಕೊಡುಗೆಯಾಗಿ ಅವರ ಅಭಿನಯದ ‘ಬುದ್ಧಿವಂತ-2’ ಬಿಡುಗಡೆ ಕಾಣುತ್ತಿದೆ.

ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬವಾಗಿದ್ದು, ಅದಕ್ಕೂ ಎರಡು ದಿನ ಮುಂಚೆಯೇ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ.

ಈ ಮೂಲಕ ಬುದ್ಧಿವಂತ-2 ಯಾವಾಗ ಬಿಡುಗಡೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ವಿವರ ನೀಡಿದೆ.

ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಡಾ.ಟಿ.ಆರ್ ಚಂದ್ರಶೇಖರ್ ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ ಇದಾಗಿದೆ.

ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ಜೋಡಿಯಾಗಿ
ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಈ ಚಿತ್ರದಲ್ಲಿ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *