Snehapriya.com

June 8, 2025

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ನಿಶ್ಚಿತಾರ್ಥ..

Social Share :

ದಕ್ಷಿಣ ಭಾರತದ ಸ್ಟಾರ್ ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಅರ್ಜುನ್ ನಿಶ್ಚಿತಾರ್ಥ ಇತ್ತೀಚೆಗೆ ಕುಟುಬಸ್ಥರ ಸಮ್ಮುಖದಲ್ಲಿ ನೆರವೇರಿತು.

ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸೀತಾರಾಮ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ
ಅವರ ನಿಶ್ಚಿತಾರ್ಥ ನೆರವೇರಿತು.

ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಜರಿದ್ದರು. ನಟ ಹಾಗೂ ಸಂಬಂಧಿ ಧ್ರುವ ಸರ್ಜಾ ಮತ್ತು ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

ಐಶ್ವರ್ಯ ಈಗಾಗಲೇ ನಟಿಯಾಗಿ ಜನಪ್ರಿಯರಾಗಿದ್ದು, ಉಮಾಪತಿ ಕೂಡ ನಟನಾಗಿ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ.

ನಿಶ್ಚಿತಾರ್ಥದಲ್ಲಿ ಉಮಾಪತಿ ಹಾಗೂ ಐಶ್ವರ್ಯ ಅವರ ಸುಂದರ ಉಡುಗೆ ಎಲ್ಲರ ಗಮನ ಸೆಳೆಯಿತ್ತು. ಉಮಾಪತಿ ಅವರಿಗೆ ಮನೀಶ್ ಮಲ್ಹೋತ್ರ ಹಾಗೂ ಐಶ್ವರ್ಯ ಅವರಿಗೆ ಜಯಂತಿ ರೆಡ್ಡಿ ಅವರು ವಸ್ತ್ರವಿನ್ಯಾಸ ಮಾಡಿದ್ದರು. ಆಕರ್ಷಕವಾಗಿದ್ದ ರೂಬಿ ಹರಳಿನ ಬಂಗಾರದ ನಿಶ್ಚಿತಾರ್ಥದ ಉಂಗುರಗಳನ್ನು ಜೈಪುರದಿಂದ ತರಿಸಲಾಗಿತ್ತು.

2024 ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *