*ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ ಚೀತಾ..*
*ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶಕದಾಗಿ ಬಡ್ತಿ*
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಚೀತಾ’ ಚಿತ್ರದ ಮುಹೂರ್ತ ಬುಧವಾರ ಅಂದರ ಕನ್ನಡ ರಾಜ್ಯೋತ್ಸವದ ಶುಭ ದಿನದಂದು ನೆರವೇರಿತು.
ಬೆಂಗಳೂರಿನ ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.
ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿರುವವೆ. ಈ ಚಿತ್ರದ ಮೂಲಕ ನಿರ್ದೇಶಕನಾಗುವ ನನ್ನ ಕನಸು ಈಡೇರುತ್ತಿದೆ ಎಂದವರು ನಿರ್ದೇಶಕ ರಾಜ್ ಕಲೈ ಕುಮಾರ್.
ಇದು ಪ್ರಜ್ವಲ್ ಅವರ ಮೂವತ್ತೊಂಬತ್ತನೇ ಚಿತ್ರ. ಹಾಗೆಯೇ ಇದೊಂದು ಮಾರ್ಕೆಟ್ ನಲ್ಲಿ ನಡೆಯುವ ಕಥೆ. ಮಾರ್ಕೆಟ್ ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲಾ ಸೂಪರ್ ಫಾಸ್ಟ್. ನಮ್ಮ ಚಿತ್ರದ ಹೀರೋ ಕೂಡ ಚಿರತೆಯಷ್ಟೇ ವೇಗದವನು. ಹಾಗಾಗಿ ನಮ್ಮ ಚಿತ್ರಕ್ಕೆ ಚೀತಾ ಎಂದು ಹೆಸರಿಡಲಾಗಿದೆ ಎಂಬ ವಿವರ ಬಂತು.
ಕಲಾ ನಿರ್ದೇಶಕ ಶಿವು ಅದ್ದೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್ ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ನವೆಂಬರ್ ಆರರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳುತ್ತಾ ಹೋದರು ನಿರ್ದೇಶಕರು.
ಕಲೈ ಮಾಸ್ಟರ್ ನೃತ್ಯ ನಿರ್ದೇಶಕರಾದಾಗ ಮೊದಲು ಸಂಯೋಜಿಸಿದ ನೃತ್ಯದಲ್ಲಿ ನಾನು ಭಾಗಿಯಾಗಿದ್ದೆ. ಅವರ ಮೊದಲ ಚಿತ್ರಕ್ಕೂ ನಾನೇ ಹೀರೋ ಎಂದರು ಪ್ರಜ್ವಲ್ ದೇವರಾಜ್.
ನಿರ್ದೇಶಕರು ಒಳ್ಳೆ ಕಥೆ ಸಿದ್ದ ಮಾಡಿಕೊಂಡಿದ್ದಾರೆ. ಮಾರ್ಕೆಟ್ ನಲ್ಲೇ ಹುಟ್ಟಿ, ಅಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು ಎಂದು ಪ್ರಜ್ವಲ್ ದೇವರಾಜ್ ಹೇಳುತ್ತಾ ಹೋದರು.
ಗುರುರಾಜ್ ಜಗ್ಗೇಶ್ ಅವರಿಗೆ ಪ್ರಜ್ವಲ್ ಸ್ನೇಹಿತನ ಪಾತ್ರ ಎಂಬ ವಿವರಣೆ ಬಂತು.
ಶೃತಿ ಹರಿಹರನ್, ಶಿವರಾಜ್ ಕೆ.ಆರ್ ಪೇಟೆ, ಗೋವಿಂದೇ ಗೌಡ ಮುಂತಾದ ಕಲಾವಿದರು ಚಿತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕಿ ಪ್ರತಿಭಾ ನರೇಶ್ ಧನ್ಯವಾದ ತಿಳಿಸಿದರು.
ವಿಶೇಷವೆಂದರೆ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಸೇರಿದಂತೆ ಸಿನಿಮಾದ ಅಷ್ಟು ತಂತ್ರಜ್ಞರ ಫೋಟೋ ಶೂಟ್ ಮಾಡಿಸುವುದರ ಮೂಲಕ ತೆರೆಯ ಹಿಂದೆ ದುಡಿಯುವ ತಂತ್ರಜ್ಞರಿಗೆ ವಿಶೇಷ ಗೌರವ ನೀಡಲಾಗಿದೆ.