Snehapriya.com

June 8, 2025

ಶುಗರ್ ಫ್ಯಾಕ್ಟರಿ ಹಣೆಬರಹ ಕೃಷ್ಣಗೆ ಅರ್ಮಾನ್ ಬೆಂಬಲ..

Social Share :

ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ಮುಖ್ಯ ಪಾತ್ರದಲ್ಲಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ ‘ಶುಗರ್ ಫ್ಯಾಕ್ಟರಿ’ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೊಂಡಿದೆ.

ಅರ್ಮಾನ್ ಮಲ್ಲಿಕ್ ಹಾಡಿರುವ ‘ಹಣೆ ಬರಹ’ ಎಂಬ ಸುಮಧುರ ಗೀತೆಗೆ ಕಬೀರ್ ರಫಿ ಸಂಗೀತ ನೀಡಿದ್ದಾರೆ ಹಾಗೂ ರಾಘವೇಂದ್ರ ಕಾಮತ್ ಸಾಹಿತ್ಯವಿದೆ.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೈಲರ್ ಕೂಡ ಅಭಿಮಾನಿಗಳ ಮನ ಗೆದ್ದಿದೆ.

ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆ ಕಾಣುತ್ತಿದ್ದು, ಡಾರ್ಲಿಂಗ್ ಕೃಷ್ಣ ಅವರ ಚಿತ್ರಗಳಲ್ಲಿಯೇ ಇದು ಅದ್ದೂರಿ ವೆಚ್ಚದ ಚಿತ್ರವಾಗಿದೆ ಎಂಬುದು ಮಾಹಿತಿ.

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *