Snehapriya.com

June 9, 2025

ಮಿಲಿಂದ್ ಅನ್ ಲಾಕ್ ರಾಘವ ಅದ್ದೂರಿ ಹಾಡು ಬಿಡುಗಡೆ..

Social Share :

ನಿರ್ಮಾಪಕ ಮಂಜುನಾಥ್. ಡಿ ಅವರ ಪುತ್ರ ಮಿಲಿಂದ್ ಗೌತಮ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಅನ್ ಲಾಕ್ ರಾಘವ’ ಚಿತ್ರದ ‘ನನ್ನ ಹುಡುಗಿ’ ಅದ್ದೂರಿ ಹಾಡು ಬಿಡುಗಡೆ ಕಂಡಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ‘ಅನ್ ಲಾಕ್ ರಾಘವ’ ಚಿತ್ರದ ಹಾಡು ಮಿಲಿಂದ್ ಗೌತಮ್ ಹುಟ್ಟುಹಬ್ಬದ ಉಡುಗೋರೆಯಾಗಿ ಬಿಡುಗಡೆಗೊಂಡಿದ್ದು ವಿಶೇಷ.

ಸಾಹಿತಿ ಹೃದಯಶಿವ ಬರೆದಿರುವ ಹಾಗೂ ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ಸಾಯಿ ವಿಘ್ನೇಶ್ ಹಾಡಿದ್ದಾರೆ. ಎ2 ಮ್ಯೂಜಿಕ್ ಮೂಲಕ ಹಾಡು ಬಿಡುಗಡೆಗೊಂಡಿತು.

ಚಿತ್ರದ ಶೂಟಿಂಗ್ ನಂತರದ ಕೆಲಸಗಳು ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಬರಲಿದೆ. ಈ ಹಾಡಿನ ಚಿತ್ರೀಕರಣ ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ನಡೆದಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ‌ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳು ಉತ್ತಮವಾಗಿವೆ. ಇದಕ್ಕೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ.

ಸತ್ಯಪ್ರಕಾಶ್ ಈ ಚಿತ್ರದ ಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದಾರೆ. ನನ್ನ ಮಗ ಮಿಲಿಂದ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ ಎಂದರು ನಿರ್ಮಾಪಕ ಮಂಜುನಾಥ.ಡಿ.

ಮತ್ತೊಬ್ಬ ನಿರ್ಮಾಪಕ ಗಿರೀಶ್ ಕುಮಾರ್ ಸಹ ಚಿತ್ರದ ಕುರಿತು ಮಾತನಾಡಿ, ಮಿಲಿಂದ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.

ಚಿತ್ರದುರ್ಗದ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡು ನನ್ನ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವುದು ಖುಷಿ ತಂದಿದೆ ಎಂದರು ಮಿಲಿಂದ್ ಗೌತಮ್.

ನಟಿ ರೆಚೆಲ್ ಡೇವಿಡ್ ಸಹ ಹಾಡಿನ ಬಗ್ಗೆ ಮಾತನಾಡುತ್ತಾ ಶುಭಾಶಯ ಕೋರಿದರು. ಛಾಯಾಗ್ರಾಹಕ ಲವಿತ್, ಸಂಕಲನಕಾರ ಅಜಯ್ ಹಾಗೂ ನೃತ್ಯ ಸಂಯೋಜಕ ಮುರಳಿ ಮಾಸ್ಟರ್ ಹಾಡಿನ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *