Snehapriya.com

December 24, 2024

ಸಸ್ಪೆನ್ಸ್ ಥ್ರಿಲ್ಲರ್ ರಣಾಕ್ಷ

Social Share :

ಈ‌ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ.

ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮ ಈಚೆಗೆ ನಡೆಯಿತು.

ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮೊದಲ ನೋಟಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದರು.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು, ರಕ್ಷಾ ಹನುಮಂತು ಹಾಗೂ ರೋಹಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆವಿಆರ್. ಪಿಕ್ಚರ್ಸ್ ಮೂಲಕ ಹೆಚ್.ಎಸ್.ರಾಮು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶೋಭಾ ಶಿವಾಜಿರಾವ್ ಸಹ ನಿರ್ಮಾಪಕರಾಗಿದ್ದಾರೆ.

ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ರಾಘವ, ಇಡೀ ಕಥೆ ಒಬ್ಬ ಹುಡುಗಿ ಮೇಲೆ ನಿಂತಿರುತ್ತದೆ. ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ. ಚಿತ್ರದಲ್ಲಿ 3 ಹಾಡು, 3 ಸಾಹಸ ದೃಶ್ಯಗಳಿವೆ. ವಿಶಾಲ್ ಆಲಾಪ್ ಸಂಗೀತ ನೀಡಿದ್ದು, ದೀಪಕ್ ಕುಮಾರ್ ಛಾಯಾಗ್ರಹಣವಿದೆ ಎಂಬ ವಿವರ ನೀಡಿದರು.

ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಫೆಬ್ರವರಿಗೆ ಬಿಡುಗಡೆ ಮಾಡುವ ಯೋಜನೆ ಇದೆ. ಸದ್ಯದಲ್ಲೇ ಆಡಿಯೋ ಬಿಡುಗಡೆ ಮಾಡುವ ಯೋಜನೆಯೂ ಇದೆ ಎಂದರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *