Snehapriya.com

June 8, 2025

ವರಮಹಾಲಕ್ಷ್ಮೀ ಹಬ್ಬಕ್ಕೆ ಗೌರಿ ಸಮರ್ಜಿತ್ ಲಂಕೇಶ್ ಆಟ ಶುರು..

Social Share :

* ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚಿತ್ರ ಆಗಸ್ಟ್ 15 ರಂದು ತೆರೆಗೆ..*

ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.

ವಿಶೇಷ ಸಂದರ್ಭದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿತು. ವಿದ್ಯಾರ್ಥಿಗಳು ತುಂಬಿ ತುಳುಕುತ್ತಿದ್ದ ಸಭಾಂಗಣದಲ್ಲಿ ಇಂದ್ರಜಿತ್ ಲಂಕೇಶ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು.

ಅದು ರಾಜಾಜಿನಗರದ ವಿದ್ಯಾವಿಹಾರ (ಎಂ ಇ ಎಸ್ ಮ್ಯಾನೇಜ್ಮೆಂಟ್) ಕಾಲೇಜು. ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಚಿತ್ರತಂಡ ಆಶಯಗಳನ್ನು ಪ್ರಕಟಿಸಿತು.

ಗೌರಿ ಚಿತ್ರತಂಡ ಜಿಲ್ಲಾ ಕೇಂದ್ರ ಹಾಗೂ ಇತರ ಶಾಲೆಗಳಿಗೆ ಭೇಟಿ ನೀಡಿದಾಗ, ಅಲ್ಲಿ ವಿದ್ಯಾರ್ಥಿಗಳಿಂದ ಅಭೂತಪೂರ್ವ ಬೆಂಬಲ ದೊರೆಯಿತು. ಇದು ಯುವ ಸಮೂಹ ಮೆಚ್ಚುವ ಸಿನಿಮಾ ಎಂಬುದು‌ ಅಲ್ಲಿ ಸಾಬೀತಾಯಿತು ಎಂದರು ಇಂದ್ರಜಿತ್ ಲಂಕೇಶ್.

ಪ್ರತಿಯೊಂದು ಶ್ರಮದಿಂದಲೇ ಕೂಡಿರುತ್ತದೆ. ನನ್ನ ಕನಸು ನನಸಾಗುವ ಕಾಲದ ಖುಷಿ ಇದೆ. ಇದಕ್ಕೆ ಅಪ್ಪನ ಪ್ರೋತ್ಸಾಹ ಬಹಳ ದೊಡ್ಡದು ಎಂದರು ಸಮರ್ಜಿತ್ ಲಂಕೇಶ್.

ಆಗಸ್ಟ್ 15 ನನ್ನ ಕನಸು ನನ್ನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದೆ‌. ಅವಕಾಶ ನೀಡಿದ ಇಂದ್ರಜಿತ್ ಲಂಕೇಶ್ ಅವರಿಗೆ ಧನ್ಯವಾದ ಎಂದರು ನಟಿ ಸಾನ್ಯ ಅಯ್ಯರ್.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *