Snehapriya.com

April 13, 2025

ಗಮನ ಸೆಳೆದ 45 ಟೀಸರ್ ಪ್ಯಾನ್ ಇಂಡಿಯಾ ಪ್ರಚಾರ

Social Share :

* ಮುಂಬೈ, ಚೆನ್ನೈ, ಹೈದ್ರಾಬಾದ್ ಹಾಗೂ ಕೊಚ್ಚಿಯಲ್ಲಿ ಪ್ರಚಾರ *

ಅದ್ದೂರಿ ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಾಣ ಹಾಗೂ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ನಿರ್ದೇಶನದ ’45’ ಚಿತ್ರದ ಪ್ಯಾನ್ ಇಂಡಿಯಾ ಪ್ರಚಾರ ಆರಂಭವಾಗುತ್ತಿದೆ.

ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರವು ಹಾಲಿವುಡ್ ಮಾದರಿಯ ಅದ್ದೂರಿ ಮೇಕಿಂಗ್ ಹೊಂದಿರುವುದು ವಿಶೇಷವಾಗಿದೆ.

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್’ ಬ್ಯಾನರ್ ನಲ್ಲಿ ಅಪಾರ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ ಚಿತ್ರ ’45’ ಆರಂಭದಿಂದಲೂ ಸಾಕಷ್ಟು ಗಮನ ಸೆಳೆದಿದೆ.

ಯುಗಾದಿ ಹಬ್ಬದಂದು ಈ ಚಿತ್ರದ ಟೀಸರ್ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಿತ್ತು. ಈ ಅದ್ಭುತ ಟೀಸರ್ ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಟೀಸರ್ ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ದೂರಿಯಾಗಿ ಬಿಡುಗಡೆ ಕಾಣಲಿದೆ. ಆದರೆ ಅದಕ್ಕೆ ಮುಂಚೆ ಚಿತ್ರತಂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುವ ಸಿದ್ಧತೆ ಮಾಡಿಕೊಂಡಿದೆ.

ಹಾಗಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪ ರಮೇಶ್ ರೆಡ್ಡಿ ಅವರು ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಮಾಧ್ಯಮ ಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.

ಚಿತ್ರ ಆರಂಭದಿಂದಲೂ ಯಾವುದೇ ಕೊರತೆ ಬಾರದ ಹಾಗೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಖಾಸಗಿ ವಿಮಾನದಲ್ಲಿ ಚಿತ್ರತಂಡದವರ ಜೊತೆಗೆ ಹೊರಡಲಿದ್ದಾರೆ.

ಮೊದಲಿಗೆ ಏಪ್ರಿಲ್ 15 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಂಬೈನ ಜುಹುನ ಪಿವಿಆರ್ ನಲ್ಲಿ ಮಾಧ್ಯಮ ಗೋಷ್ಠಿ ನಡೆಸುವ ಚಿತ್ರತಂಡ ಅಂದು ಸಂಜೆ 7 ಗಂಟೆಗೆ ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿರುವ ಅರ್ ಕೆ ಪಿವಿಆರ್ ನಲ್ಲಿ ಪ್ರಚಾರ ಸಭೆ ನಡೆಸಲಿದೆ.

ಮರುದಿನ ಏಪ್ರಿಲ್ 16ರ ಬುಧವಾರ ಬೆಳಿಗ್ಗೆ 11ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್ ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ ಪಿವಿಆರ್ ಪೋರಂ ನಲ್ಲಿ ’45’ಚಿತ್ರದ ಮಾಧ್ಯಮ ಗೋಷ್ಠಿ ನಡೆಸಲಿದೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *