ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮುಖ್ಯ ಪಾತ್ರದಲ್ಲಿರುವ ‘ಗಣ’ ಚಿತ್ರದ ರೊಮ್ಯಾಂಟಿಕ್ ಹಾಡು ಈಚೆಗೆ ಬಿಡುಗಡೆ ಕಂಡಿದೆ.
ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ನಿರ್ಮಿಸಿ, ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರು.
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ತಾರಾಬಳಗದಲ್ಲಿದ್ದಾರೆ.