Snehapriya.com

June 8, 2025

ಓ ಮೈ ಲವ್ ವಿಶೇಷ ಗೆಲುವು

Social Share :

ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಅಭಿನಯದ ಹಾಗೂ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ವಿಶೇಷ ಗೆಲುವಿನ ಹಾದಿಯಲ್ಲಿದ್ದು, 50 ದಿನ ಪೂರೈಸುವ ಆಶಯದಲ್ಲಿದೆ..

ಬಳ್ಳಾರಿಯ ಉದ್ಯಮಿ ಜಿಸಿಬಿ ಪ್ರೊಡಕ್ಷನ್ ನ ಜಿ.ರಾಮಾಂಜಿನಿ ನಿರ್ಮಾಣದ ಈ ಚಿತ್ರಕ್ಕೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ..

ಸಿನಿಮಾ ನೋಡಿದವರು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ಮಾಸ್ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಳ್ಳುವಲ್ಲಿ ಚಿತ್ರ ಯಶಸ್ವಿಯಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಈಗಾಗಲೇ 25 ದಿನ ಪೂರೈಸಿದ್ದು, ಸದ್ಯದಲ್ಲೇ 50 ದಿನ ತಲುಪಲಿದೆ. ಕಥೆ ಬರೆದು ನಿರ್ಮಾಣ ಮಾಡಿರುವ ಜಿ.ರಾಮಾಂಜಿನಿ ಅವರಿಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ. ಈ ರೀತಿಯ ಮತ್ತಷ್ಟು ಸಿನಿಮಾಗಳು ಈ ಸಂಸ್ಥೆಯಿಂದ ಹೊರಬರಲಿ ಎಂದು ಅವರ ಅಭಿಮಾನಿಗಳು ಆಶಿಸಿದ್ದಾರೆ.

ಮುಂದಿನ ದಿನಗಳಲ್ಲಿ ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ನಿಂದ ಒಂದಷ್ಟು ಹೊಸ ಬಗೆಯ ಸಿನಿಮಾಗಳನ್ನು ನಿರ್ಮಿಸುವ ಯೋಜನೆ ಜಿ.ರಾಮಾಂಜಿನಿ ಅವರಿಗಿದೆ. ಹಾಗೆಯೇ ನಿರ್ದೇಶಕ ಸ್ಮೈಲ್ ಶ್ರೀನು ಅವರಿಗೆ ಕನ್ನಡ ಸೇರಿದಂತೆ ಬೇರೆ ಭಾಷೆಗಳಿಂದಲೂ ಬೇಡಿಕೆ ಬಂದಿದೆ.

ಚಿತ್ರದ ಯಶಸ್ಸಿನ ಕುರಿತಂತೆ ನಿರ್ದೇಶಕ ಸ್ಮೈಲ್ ಶ್ರೀನು ಹರ್ಷ ವ್ಯಕ್ತಪಡಿಸಿದ್ದಾರೆ. ಬಿಸಿ ಸೆಂಟರ್‌ಗಳಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದು ನಮ್ಮ ನಿರೀಕ್ಷೆಗಳನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *