Snehapriya.com

June 8, 2025

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಸಂಚಾರಿ ವಿಜಯ್ ಹೆಸರಲ್ಲಿ ಪ್ರಶಸ್ತಿ

Social Share :

ಅಕಾಡೆಮಿಯ 4 ನೇ ವರ್ಷದ ಪ್ರಶಸ್ತಿ

ಪುನೀತ್ ರಾಜ್‍ಕುಮಾರ್, ಸಂಚಾರಿ ವಿಜಯ್, ಚಿ.ಉದಯಶಂಕರ್, ಶಂಕರ್ ನಾಗ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆ

ನಾಮ ನಿರ್ದೇಶನ ಪ್ರಕಟ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ನಾಲ್ಕನೇ ಪ್ರಶಸ್ತಿ ನೀಡಿಕೆಯ ಅದ್ದೂರಿ ಸಮಾರಂಭ ಇದೇ 5 (ಮಾರ್ಚ್ 5)ರಂದು ನಡೆಯುತ್ತಿದ್ದು, ದಿವಂಗತ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿರುವುದು ವಿಶೇಷವಾಗಿದೆ.

ಈಚೆಗೆ ನಡೆದ ಸಮಾರಂಭದಲ್ಲಿ ಅಕಾಡೆಮಿಯ ಪ್ರಶಸ್ತಿ ದಿನಾಂಕ ಹಾಗೂ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಚಿತ್ರಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು..

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ನೀಡಿಕೆಗೆ ಮುನ್ನ ಪೂರ್ವಭಾವಿಯಾಗಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಪಟ್ಟಿ ಹಾಗೂ 2023ನೇ ವರ್ಷದ ಟ್ರೋಫಿ ಅನಾವರಣ ಮಾಡಲಾಯಿತು.

ಸತತ ಮೂರು ವರ್ಷಗಳಿಂದ ಯಶಸ್ವಿಯಾಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡುತ್ತಾ ಬಂದಿರುವ ಚಂದವನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ, ಪ್ರತಿ ವರ್ಷವೂ ಒಂದಿಲ್ಲೊಂದು ವಿಶೇಷ ಪ್ರಶಸ್ತಿಯನ್ನು ಘೋಷಿಸುತ್ತಾ ಬಂದಿದೆ.

ಈ ಬಾರಿ ಐದು ವಿಶೇಷ ಪ್ರಶಸ್ತಿಗಳನ್ನು ತನ್ನ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಳಿಸಿದ್ದು, ಈ ಐದೂ ಪ್ರಶಸ್ತಿಗಳಿಗೂ ಕನ್ನಡ ಸಿನಿಮಾ ರಂಗಕ್ಕೆ ತಮ್ಮದೇ ಕೊಡುಗೆ ನೀಡಿದ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಿದೆ.

ಅತ್ಯುತ್ತಮ ನಟ (ಮೊದಲ ಸಲ) ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ, ಅತ್ಯುತ್ತಮ ನಟಿ (ಮೊದಲ ಸಲ) ಪ್ರಶಸ್ತಿಯನ್ನು ಕನ್ನಡದ ಮೊದಲ ಚಿತ್ರದ ನಾಯಕಿ ತ್ರಿಪುರಾಂಭ ಹೆಸರಿನಲ್ಲಿ, ಅತ್ಯುತ್ತಮ ನಿರ್ದೇಶಕ (ಮೊದಲ ಸಲ) ಹೆಸರಾಂತ ನಟ, ನಿರ್ದೇಶಕ ಶಂಕರ್ ನಾಗ್ ಅವರ ಹೆಸರಿನಲ್ಲಿ, ಅತ್ಯುತ್ತಮ ನಿರ್ಮಾಪಕ (ಮೊದಲ ಸಲ) ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ಮಾಪಕ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ, ಅತ್ಯುತ್ತಮ ಬರಹಗಾರ (ಮೊದಲ ಸಲ) ಪ್ರಶಸ್ತಿಯನ್ನು ಚಿ.ಉದಯಶಂಕರ್ ಹೆಸರಿನಲ್ಲಿ ಪ್ರದಾನ ಮಾಡಲಾಗುತ್ತಿದೆ.

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ನಟಿಯರಾದ ಇತಿ ಆಚಾರ್ಯ, ಪಾವನಾ ಗೌಡ ಮತ್ತು ಸಂಗೀತಾ ಭಟ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಟ್ರೋಫಿ ಅನಾವರಣ ಮಾಡಿದರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *