Snehapriya.com

November 22, 2024

ಸಿನಿ ಹನಿ

ಕಮಲ್ ಮರಿಯಾ ಮೈ ಡಾರ್ಲಿಂಗ್ ಮತ್ತೆ ತೆರೆಗೆ ನರೇಂದ್ರ ಬಾಬು ಕಥೆ..

Social Share :


ಈಗ್ಗೆ ನಲವತ್ತು ವರ್ಷಗಳ ಹಿಂದೆ ತೆರೆ ಕಂಡಿದ್ದ ಕಮಲ್ ಹಾಸನ್ ಅವರು ಮುಖ್ಯ ಪಾತ್ರದಲ್ಲಿದ್ದ ಕನ್ನಡ ಚಿತ್ರ ಮರಿಯಾ ಮೈ ಡಾರ್ಲಿಂಗ್..

ಶೀರ್ಷಿಕೆ ಹಾಡಿನಿಂದಲೇ ಹೆಚ್ಚು ಜನಪ್ರಿಯವಾಗಿದ್ದ ಬೆಲ್ ಬಾಟಮ್ ಪ್ಯಾಂಟ್ ಕಾಲದ ಆ ಚಿತ್ರದ ಹೆಸರು ಮತ್ತೆ ಹೊಸದಾಗಿ ಮೂಡಿಬರಲಿದೆ.

ಅಂದ ಹಾಗೆ ಕನ್ನಡದಲ್ಲಿ ‘ಪಲ್ಲಕ್ಕಿ’, ’13’ ಹೀಗೆ ವಿಭಿನ್ನ ನೆಲೆಯ ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೆ.ನರೇಂದ್ರಬಾಬು ಈಗ ‘ಮರಿಯಾ ಮೈ ಡಾರ್ಲಿಂಗ್’ ಶೀರ್ಷಿಕೆ ಇರುವ ಚಿತ್ರವನ್ನು ನಿರ್ದೇಶಿಸಲು ಕೈಗೆತ್ತಿಕೊಂಡಿದ್ದಾರೆ.

ಅಪ್ಪಟ ಪ್ರೇಮಕಥೆಯಾಗಿರುವ ಈ ಚಿತ್ರವನ್ನು ವಿನ್ಸ್ ಡೆವಲಪರ್ಸ್ ಅರ್ಪಿಸಿ, ಎಸ್.ಕೆ. ಸಿನಿ ಎಂಟರ್ ಟೈನರ್ಸ್ ಅಡಿಯಲ್ಲಿ, ಚೇತನಾ ಮಂಜುನಾಥ್ ನಿರ್ಮಿಸುತ್ತಿದ್ದಾರೆ.

ಬರುವ ನವೆಂಬರ್ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣವನ್ನು ಆರಂಭಿಸಿ, ಉತ್ತರ ಭಾರತದ ಕಾಶ್ಮೀರ ಮತ್ತು ಸುತ್ತಮುತ್ತಲಿನ ರಮಣೀಯ ಸ್ಥಳಗಳಲ್ಲಿ ಶೂಟಿಂಗ್ ನಡೆಸುವ ಯೋಜನೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಕೆ.ನರೇಂದ್ರ ಬಾಬು ಅವರ ತಂಡಕ್ಕಿದೆ.

Social Share :

ನಿರ್ಭಯ 2 ಟೀಸರ್ ಅನಾವರಣ..

Social Share :


ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ ‘ನಿರ್ಭಯ 2’ ಚಿತ್ರದ ಟೀಸರ್ ಬಿಡುಗಡೆ ಕಂಡಿದೆ.

ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಮಹಿಳೆಯರ ಮೇಲಿನ ಶೋಷಣೆ ತಡೆಯುವ ಕ್ರಮಗಳ ಕುರಿತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರೆ ಕಥೆ ಚಿತ್ರಕಥೆ ಬರೆದಿದ್ದಾರೆ. ಆಕಾಶ್ ಪರ್ವ ಸಂಗೀತ ನೀಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ತರುವ ಪ್ರಯತ್ನವಿದೆ.

ಶ್ರಾವ್ಯ ರಾವ್ (ಸಾತ್ವಿಕ), ಅರ್ಜುನ್ ಕೃಷ್ಣ, ಹರೀಶ್ ಜಲೀಲ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Social Share :

ಸದ್ಯವೇ ಚಿತ್ರಮಂದಿರದಲ್ಲಿ ಆನ್ ಲೈನ್ ಮದುವೆ ಶೋಭನ..

Social Share :

ಚಿತ್ರವಿಚಿತ್ರ ಹೆಸರುಗಳಿಂದಲೇ ಕೆಲವು ಚಿತ್ರಗಳು ಗಮನ ಸೆಳೆಯುತ್ತವೆ. ಅಂದ ಹಾಗೆ ಈ ಚಿತ್ರದ ಹೆಸರು ‘ಆನ್ ಲೈನ್ ಮದುವೆ ಆಫ್ ಲೈನ್ ಶೋಭನ’.

ಇದೊಂದು ನಕ್ಕು ನಗಿಸುವ ಚಿತ್ರವೆಂದು ಚಿತ್ರತಂಡ ಬಿಡುಗಡೆ ಮಾಡಿರುವ ಸ್ಟಿಲ್ ಗಳು ಹೇಳುತ್ತಿವೆ..

ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಅವರೀಗ ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ ಅವರೇ ನಿರ್ಮಾಣ ಮಾಡಿರುವ ಆ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಸದ್ಯವೇ ಬಿಡುಗಡೆಯಾಗಲಿದ್ದು, ಮುಂದಿನ ತಿಂಗಳು ಚಿತ್ರವೂ ತೆರೆ ಕಾಣಲಿದೆ.

ಯು/ಎ ಪ್ರಮಾಣ ಪತ್ರ ಪಡೆದಿರುವ ಈ ಚಿತ್ರವು ಪರಿಶುದ್ದವಾದ ಹಾಸ್ಯ, ಜೊತೆಗೆ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ ಹಾಗೂ ಆನೇಕಲ್ ನ ಸುಗ್ಗಿ ರೆಸಾರ್ಟ್, ಕೋರಮಂಗಲದ ಪಬ್ ವೊಂದರಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂಬುದು ಚಿತ್ರತಂಡದ ಮಾಹಿತಿ.

ಜಗಪ್ಪ, ಸುಶ್ಮಿತಾ, ಸೀರುಂಡೆ ರಘು, ಗಜೇಂದ್ರ, ಗಜೇಂದ್ರ, ರಾಘವಿ ಸೇರಿದಂತೆ ಗಿಚ್ಚಿ ಗಿಲಿ ಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಮತ್ತು ಯಶಸ್ವಿನಿ, ಚಂದನ, ಶರಣ್ಯರೆಡ್ಡಿ, ಆಂಕರ್ ದಯಾನಂದ್ ಇದರಲ್ಲಿ ಅಭಿನಯಿಸಿದ್ದಾರೆ.

ಬಾಲು ಛಾಯಾಗ್ರಹಣ, ರೋಹಿತ್ ಸಂಕಲನ, ಅಲೆಕ್ಸ್ ಸಂಗೀತ, ಅರುಣ ಪ್ರಸಾದ್ ಸಾಹಿತ್ಯ, ಗಣೇಶ್, ಸದಾಶಿವ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Social Share :

ತಂದೆ ಮಗ ಹೃದಯಸ್ಪರ್ಶಿ ಹರ್ಷ

Social Share :

ಈ ಚಿತ್ರ ತಂದೆ ಮಗನ ಸೆಂಟಿಮೆಂಟ್ ಕಥೆ ಹೇಳುತ್ತದೆ. ಮಕ್ಕಳ ಬಗ್ಗೆ ಪರಿಣಾಮಕಾರಿ ಸಂದೇಶ ನೀಡುವ ಪ್ರಯತ್ನವಿದು..

ಹಾಗೆಂದು ಹೇಳಿಕೊಂಡಿದೆ ಚಿತ್ರತಂಡ. ಸೋಮಶೇಖರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ಬಾಕಿ ಇದೆ.

ಚಿತ್ರದ ಹೆಸರು ಹರ್ಷ..!

ಪ್ರಮುಖ ಪಾತ್ರದಲ್ಲಿ ಮಾಸ್ಟರ್ ಹರ್ಷ ಕಾಣಿಸಿಕೊಂಡಿದ್ದು, ರಾಘವೇಂದ್ರ ಬಿ. ಮೈಸೂರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿ ಸಹ ನಿರ್ದೇಶನ ಮಾಡಿದ್ದಾರೆ.

ಮುಖ್ಯ ಪಾತ್ರದಲ್ಲಿ ಪ್ರಪುಲ್ ಸುರೇಂದ್ರ ನಟಿಸಿದ್ದು, ಮಾನಸಗೌಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಂದೆಯ ಪಾತ್ರದಲ್ಲಿ ಹಿರಿಯನಟ ಶಂಕರ್ ಅಶ್ವಥ್ ನಟಿಸಿದ್ದಾರೆ. ಅಲ್ಲದೆ ಸಂಗೀತ, ಮೈತ್ರಿ, ಸುನಿಲ್ ಬನವಾಶಿ, ಸಂಜು, ಮಾದೇಗೌಡ ಹೆಗ್ಗಡ ದೇವನಕೋಟೆ, ಮನೋಜ್ ಷಡಕ್ಷರಿ, ರವಿಕುಮಾರ್ S. ಗೆಂಡೆ, ದೀಪ, ಖುಷಿ ಹೀಗೆ ಸಾಕಷ್ಟು ಕಲಾವಿದರ ತಾರಾಬಳಗವನ್ನು ಈ ಚಿತ್ರ ಒಳಗೊಂಡಿದೆ.

ಸಮೃದ್ಧಿ ರಾಘವೇಂದ್ರ ನಿರ್ಮಾಣವಿರುವ ಚಿತ್ರಕ್ಕೆ ಶಶಿಧರ್ ಎ. ಸಹ ನಿರ್ಮಾಪಕ. ಕೊಟ್ರೇಶ್ ಪಾ. ಅರುಣಾ ಛಾಯಾಗ್ರಹಣ, ಅತೀಶಯ್ ಜೈನ್ ಸಂಗೀತ, ಗಿರೀಶ್.ಎ.ಪಿ ಸಾಹಸ,
ಸುಧಾಕರ್ ಗಂಗಾವತಿ ಕಲಾನಿರ್ದೇಶನವಿದೆ.

Social Share :

ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ವೃಷಭ

Social Share :


ದೊಡ್ಡ ಮಟ್ಟದ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.

‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ.

ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ ನಟಿಸುತ್ತಿದ್ದಾರೆ.

ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

‘ವೃಷಭ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ ಎಂದು ನಟ ಮೋಹನ್ ಲಾಲ್ ಹೇಳಿದ್ದಾರೆ.

‘ವೃಷಭ’ ಚಿತ್ರವನ್ನು ಬಾಲಿವುಡ್‌ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ.

ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ಬಹು ನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣಲಿದೆ ಎಂದು ಹೇಳಲಾಗಿದೆ.

Social Share :

ಬ್ಯಾಡ್ ನ ಅಪೂರ್ವ ಪ್ರೀತಿ

Social Share :

ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ನಟಿಸುತ್ತಿದ್ದಾರೆ.

ಕಾಮ, ಕ್ರೋಧ, ಮದ, ಮತ್ಸರ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿರುವ ಬ್ಯಾಡ್ ಚಿತ್ರದಲ್ಲಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದ್ದು, ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ಮಾಹಿತಿ.

ಈ ಚಿತ್ರದಲ್ಲಿ ಕಾಮ ಎಂಬುದು ಪ್ರೀತಿಯ ಮುಖವಾಗಿರುತ್ತದೆ.
ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿಗೆ ಪ್ರೇಮದ ಅಭಿವ್ಯಕ್ತಿ ತಿಳಿದಿರುವುದಿಲ್ಲ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರಕ್ಕೆ ಅಪೂರ್ವ ಸರಿಯಾದ ಆಯ್ಕೆಯಾಗಿತ್ತು ಎಂಬುದು ನಿರ್ದೇಶಕ ಪಿ.ಸಿ.ಶೇಖರ್ ನೀಡಿದ ವಿವರ.

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಶಕ್ತಿ ಶೇಖರ್ ಛಾಯಾಗ್ರಹಣವಿದೆ. ಸಚಿನ್ ಬಿ ಹೊಳಗುಂಡಿ ಸಂಭಾಷಣೆ, ಜಿ.ರಾಜಶೇಖರ್ ಕಲಾ ನಿರ್ದೇಶನವಿದೆ.

ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಮಂಜುನಾಥ್ , ಅಶ್ವಿನಿ ಹಾಗೂ ಇತರರು ತಾರಾ ಬಳಗದಲ್ಲಿದ್ದಾರೆ.

Social Share :

ಜವಾನ್; ನಯನತಾರಾ ಪೋಸ್ಟರ್..

Social Share :


‘ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು’

ಹೀಗೆಂದು ಬಣ್ಣಿಸಲಾಗಿದೆ. ಅದು ‘ಜವಾನ್’ ಚಿತ್ರದ ನಯನತಾರಾ ವಿನೂತನ ಶೈಲಿಯ ಪೋಸ್ಟರ್.

ಈಚೆಗೆ ಚಿತ್ರದ ಮುಖ್ಯ ಪಾತ್ರಧಾರಿ ಸ್ಟಾರ್ ನಟ ಶಾರುಕ್ ಖಾನ್ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ಹೀಗೆ ಉದ್ಘಾರ ತೆಗೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬಿಡುಗಡೆ ಕಂಡಿದ್ದ ಚಿತ್ರದ ಟೀಸರ್ ಅಭಿಮಾನಿಗಳಲ್ಲಿ ಪುಳಕ ತಂದಿತ್ತು. ಅದಾದ ಬಳಿಕ ಈಗ ಪೋಸ್ಟರ್ ಬಿಡುಗಡೆಗೊಂಡಿದೆ.

ನಯನತಾರಾ ಅವರ ಪಾತ್ರವನ್ನು ‘ಬಿರುಗಾಳಿಗೂ ಮುಂಚೆ ಬರುವ ಗುಡುಗು’ ಎಂದು ಶಾರುಖ್ ಖಾನ್ ವರ್ಣಿಸಿರುವುದು ಅ ಪಾತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಲು ಕಾರಣವಾಗಿದೆ.

ಇದೇ ಮೊದಲ ಬಾರಿಗೆ ಶಾರುಖ್ ಮತ್ತು ನಯನತಾರಾ ಒಟ್ಟಿಗೆ ನಟಿಸಿದ್ದಾರೆ. ನಯನತಾರಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಇಡೀ ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ.

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.

ಗೌರವ್ ವರ್ಮ ಈ ಚಿತ್ರದ ಸಹನಿರ್ಮಾಪಕರು. ಸೆಪ್ಟೆಂಬರ್ 7ರಂದು ಈ ಚಿತ್ರವು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಕಾಣುತ್ತಿದೆ.

Social Share :

ಹೊಂದಿಸಿ ಬರೆಯಿರಿ ಟ್ರೈಲರ್

Social Share :

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಇದೇ ಫೆ.10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಈಚೆಗೆ ಬಿಡುಗಡೆ ಕಂಡಿದೆ.

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲಾವಿದರ ತಂಡ ಈ ಚಿತ್ರದಲ್ಲಿದೆ.

ಶಾಂತಿ ಸಾಗರ್ ಹೆಚ್.ಜಿ ಛಾಯಾಗ್ರಹಣ, ಜೋ ಕೋಸ್ಟ ಸಂಗೀತ ನಿರ್ದೇಶನ, ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಚಿತ್ರಕ್ಕಿದೆ. ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಸಂಡೇ ಸಿನಿಮಾಸ್’ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Social Share :

ಜೈ ಎಲೆಕ್ಷನ್.. ಉಪ್ಪಿ ಹಾಡು

Social Share :

ಡಾ.ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ ‘ಪ್ರಜಾರಾಜ್ಯ’ ಚಿತ್ರಕ್ಕಾಗಿ ಯೋಗರಾಜ್ ಭಟ್ ಬರೆದಿರುವ ‘ಜೈ ಎಲೆಕ್ಷನ್ ಧನ್ ಧನಾ ಧನ್’ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಧನಿಯಾಗಿದ್ದಾರೆ..

ಈ ಹಾಡಿಗೆ ವಿಜೇತ್ ಮಂಜಯ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಈಚೆಗೆ ಉಪೇಂದ್ರ ಹಾಡು ಬಿಡುಗಡೆಗೊಳಿಸಿ ಚಿತ್ರಕ್ಕೆ ಶುಭ ಕೋರಿದರು. ನಿರ್ಮಾಪಕ ಡಾ.ವರದರಾಜು, ನಿರ್ದೇಶಕ ವಿಜಯ್ ಭಾರ್ಗವ್ ಹಾಗೂ ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಈ ಸಂದರ್ಭದಲ್ಲಿ ಹಾಜರಿದ್ದರು.

ಡೈನಾಮಿಕ್ ಸ್ಟಾರ್ ದೇವರಾಜ್, ನಾಗಾಭರಣ, ಅಚ್ಯುತ್ ಕುಮಾರ್, ಸುಧಾರಾಣಿ, ಶೋಭ್ ರಾಜ್, ವಿಜಯ್ ಭಾರ್ಗವ, ದಿವ್ಯ ಗೌಡ, ತಬಲನಾಣಿ, ಸುಧಾ ಬೆಳವಾಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Social Share :

ಧರ್ಮ ಕೀರ್ತಿರಾಜ್ ಹೊಸ ಬುಲೆಟ್

Social Share :

ಧರ್ಮ ಕೀರ್ತಿರಾಜ್ ಮುಖ್ಯ ಪಾತ್ರದಲ್ಲಿರುವ ‘ಬುಲೆಟ್’ ಎಂಬ ಹೊಸ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಎರಡನೇ ಹಂತಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್‌ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.

ಧರ್ಮ ಕೀರ್ತಿರಾಜ್ ಎದುರು
ಶ್ರೀಯಾ ಶುಕ್ಲ ಅಭಿನಯಿಸುತ್ತಿದ್ದು. ಅಜಿತಾ ಜಾ, ಹಿರಿಯ ನಟಿ ಭವ್ಯ, ಬಾಲಿವುಡ್ ನ ಶಿವ, ಇಸಾಕ್ ಕಾಜಿ, ಸತ್ಯಜಿತ್, ಬೇಬಿ ಸಿದ್ ಟೈನ್, ರಾಜ ದೀಪ್, ಕಿಲ್ಲರ್ ವೆಂಕಟೇಶ್, ಶೋಭ್ ರಾಜ್ ಚಿತ್ರದ ತಾರಾಬಳಗ.

ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ, ಗುರುಪ್ರಸಾದ್ ಸಂಕಲನ ಹಾಗೂ ಅಲ್ಟಿಮೇಟ್ ಶಿವು ಸಾಹಸ ಚಿತ್ರಕ್ಕಿದೆ.

Social Share :