ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದಿನಕರ್ ತೂಗುದೀಪ ಜೋಡಿ ಕನ್ನಡ ಚಿತ್ರರಂಗದಲ್ಲಿ ಹೊಸ ಕಮಾಲ್ ಮಾಡಲು ಸಜ್ಜಾಗಿದೆ.
ಉತ್ಸಾಹದ ಚಿಲುಮೆಯಾಗಿರುವ ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸ ವರ್ಷಕ್ಕೆ ಘೋಷಣೆಯಾಗಿದೆ.
ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂಬುದು ಬಹಳವೇ ಕುತೂಹಲದ ವಿಶೇಷ.
ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್.ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ.
ಚಿತ್ರದ ಪೂರ್ವ ತಯಾರಿ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿ ಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.