Snehapriya.com

June 9, 2025

ಗಣೇಶ್ ಕೃಷ್ಣಂ ಪ್ರಣಯ ಸಖಿ ಶ್ರೀನಿವಾಸರಾಜು ನಿರ್ದೇಶನ

Social Share :


ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಹಾಗೂ ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ ಹೊಸ ಚಿತ್ರ ಶೀರ್ಷಿಕೆ ಮೂಲಕವೇ ಗಮನ ಸೆಳೆಯುತ್ತಿದೆ.

ಅದೇ ಕೃಷ್ಣಂ ಪ್ರಣಯ ಸಖಿ..!

ಅಂದ ಹಾಗೆ ಸದ್ದಿಲ್ಲದೆ ಚಿತ್ರೀಕರಣ ಆರಂಭಿಸಿದ ಚಿತ್ರತಂಡ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ (ಜುಲೈ 2)ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಕೋರಿದೆ.

ಇದು ಗಣೇಶ್ ಅಭಿನಯದ 41ನೇ ಚಿತ್ರವಾಗಿದ್ದು,
ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಮುಂದೆ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ವಿವರ ನೀಡಿದೆ.

ಭಾನುವಾರ ಗಣೇಶ್ ಹುಟ್ಟುಹಬ್ಬ ಅಚರಿಸುತ್ತಿರುವ ಸಂದರ್ಭದಲ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡ ಅವರಿಗೆ ಶುಭಾಶಯ ತಿಳಿಸಿದೆ.

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರ ಇದಾಗಿದೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಗಣೇಶ್ ಅವರಿಗೆ ಜೋಡಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *