ಕೆ.ಎಂ.ರಘು ನಿರ್ದೇಶನದ ‘ಜಸ್ಟ್ ಪಾಸ್’ ಚಿತ್ರೀಕರಣ ಜನವರಿಯಲ್ಲಿ ಆರಂಭವಾಗಲಿದೆ. ನಟ ಶ್ರೀ ಮುಖ್ಯ ಪಾತ್ರದಲ್ಲಿದ್ದು, ಕಾಲೇಜು ಹುಡುಗರ ಕಥೆ ಇದಾಗಿದೆ.
ಮೈಸೂರು, ಸಕಲೇಶಪುರ, ಮಡಿಕೇರಿ ಮೊದಲಾದ ಕಡೆ ಚಿತ್ರೀಕರಣ ನಡೆಯಲಿದೆ ಶಶಿಧರ್.ಕೆ.ವಿ ನಿರ್ಮಾಪಕ. ಜನವರಿ 2ರಿಂದ ಚಿತ್ರೀಕರಣ ಆರಂಭವಾಗಲಿದೆ.
ಶ್ರೀ ಎದುರು ಪ್ರಣತಿ ನಟಿಸುತ್ತಿದ್ದು, ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಬಿಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.