* ಚಂದನ್ ಶೆಟ್ಟಿ ಪಾತ್ರಧಾರಿ *
ಈಗಲ್ ಮೀಡಿಯಾ ಕ್ರಿಯೇಷನ್ಸ್ ನ ಮುಖ್ಯಸ್ಥ ನವರಸನ್ ನಿರ್ಮಾಣದ ‘ಸೂತ್ರಧಾರಿ’ ಬಿಡುಗಡೆಗೆ ಸಜ್ಜುಗೊಂಡಿದ್ದು, ಮೇ 9ರಂದು ಪ್ರೇಕ್ಷಕರ ಮುಂದೆ ಬರಲಿದೆ.
ಕಿರಣ್ ಕುಮಾರ್ ನಿರ್ದೇಶನದ ಹಾಗೂ ರಾಕ್ ಸ್ಟಾರ್ ಚಂದನ್ ಶೆಟ್ಟಿ ಮುಖ್ಯ ಪಾತ್ರದಲ್ಲಿರುವ ಚಿತ್ರವು ಬಿಡುಗಡೆಯ ಹೊತ್ತಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.
ಈಚೆಗೆ ನಡೆದ ಸಮಾರಂಭದಲ್ಲಿ ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ‘ಸೂತ್ರಧಾರಿ’ ಚಿತ್ರದ ಬಿಡುಗಡೆ ದಿನಾಂಕ ಅನಾವರಣ ಮಾಡಿದರು.
ಮೈ ಮೂವಿ ಬಜಾರ್ ಮೂಲಕ ಚಿತ್ರರಂಗದ ಬೆಸುಗೆಯಲ್ಲಿ ಮುಖ್ಯ ಪಾತ್ರ ವಹಿಸಿರುವ ನವರಸನ್ ನಿರ್ಮಾಪಕ, ನಿರ್ದೇಶಕ ಹಾಗೂ ವಿತರಕರಾಗಿಯೂ ಗಮನ ಸೆಳೆದವರು.
ಈಗ ‘ಸೂತ್ರಧಾರಿ’ ಅವರ ಮಹತ್ವಾಕಾಂಕ್ಷೆಯ ಚಿತ್ರ. ಅದು ಅತ್ಯುತ್ತಮ ವಾಗಿ ಮೂಡಿ ಬಂದಿದೆ ಎಂಬುದು ಹೆಮ್ಮೆಯ ವಿಷಯ ಎಂದು ಹೇಳುತ್ತಾ ಹೋದರು ನವರಸನ್.
ಚಿತ್ರದ ಹಾಡುಗಳು ಟ್ರೆಂಡಿಂಗ್ ನಲ್ಲಿವೆ. ಹಾಗಾಗಿ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ ಎಂಬುದು ನಟ ಕಮ್ ಗಾಯಕ ಚಂದನ್ ಶೆಟ್ಟಿ ಅವರ ಮಾತು.
ಚಂದನ್ ಶೆಟ್ಟಿ ಜೊತೆಗೆ ಸಂಜನಾ ಆನಂದ್ ಹಾಗೂ ಅಪೂರ್ವ ನಟಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಚಿತ್ರಕ್ಕಿದೆ.
ಗಣೇಶ್ ನಾರಾಯಣ್, ಪ್ರಶಾಂತ್ ನಟನ, ಮೀರಾಶ್ರೀ, ಸುಶ್ಮಿತಾ, ಪಲ್ಲವಿ ಈ ಸಂದರ್ಭದಲ್ಲಿ ಹಾಜರಿದ್ದರು.