ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿ ಎ ಅಭ್ಯರ್ಥಿ ಯಾಗಿರುವ ದ್ರೌಪದಿ ಮುರ್ಮು ಭಾನುವಾರ ರಾಜ್ಯದ ಪ್ರವಾಸ ಕೈಗೊಂಡು ಮತ ಯೋಚಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ದ್ರೌಪದಿ ಮುರ್ಮು ಭೇಟಿ ಮಾಡಿ ಮತ ಯಾಚಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಮಾಜಿ ಮುಖ್ಯಮಂತ್ರಿಎಚ್ .ಡಿ. ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಹಾಜರಿದ್ದರು.
ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೌಹಾರ್ದ ಮಾತುಕತೆ ನಡೆಸಿದರು. ಈ ವೇಳೆ ಚೆನ್ನಮ್ಮ ದೇವೇಗೌಡ ಸಹ ಹಾಜರಿದ್ದರು.
ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯಕ್ಕೆ ಸೇರಿರುವ ಕಾರಣ ಅವರಿಗೆ ಬೆಂಬಲ ನೀಡಲಾಗುತ್ತದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲೇ ಘೋಷಣೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ದೇವೇಗೌಡರನ್ನು ಭೇಟಿ ಮಾಡಿದ್ದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಇದಕ್ಕೂ ಮುಂಚೆ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಹಾಗೂ ಸಂಸದರ ಸಭೆಯಲ್ಲಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ಹಾಜರಿದ್ದರು.