Snehapriya.com

June 6, 2025

ಉಪೇಂದ್ರ ಹುಟ್ಟುಹಬ್ಬಕ್ಕೆ 45 ಚಿತ್ರದ ವಿಶೇಷ ಪೋಸ್ಟರ್

Social Share :


ಸೂರಜ್ ಪ್ರೊಡಕ್ಷನ್ಸ್ ಮೂಲಕ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ’45’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಕಂಡಿದೆ.

ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ವಿನೂತನ ಗೆಟಪ್ ಇರುವ ಪೋಸ್ಟರ್ ಈಗ ಗಮನ ಸೆಳೆಯುತ್ತಿದೆ.

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಮುಖ್ಯ ಪಾತ್ರದಲ್ಲಿರುವ 45 ಚಿತ್ರವನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ವಿಶೇಷ ಪಾತ್ರಗಳಲ್ಲಿ ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ನಟಿಸುತ್ತಿದ್ದಾರೆ. ಬುಧವಾರ (ಸೆಪ್ಟೆಂಬರ್ 18) ರಿಯಲ್ ಸ್ಟಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ವಿನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ 45 ಚಿತ್ರತಂಡ ಅವರಿಗೆ ಶುಭಾಶಯ ತಿಳಿಸಿದೆ.

ಬುಧವಾರ ಉಪೇಂದ್ರ ಅವರ ನಿವಾಸಕ್ಕೆ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಇತರರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು.

ಗ್ರಾಫಿಕ್ಸ್ ಮೂಲಕ ಚಿತ್ರಕಥೆ ಹೆಣೆದು ಮಾಡಲಾದ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ’45’ ಚಿತ್ರ ಪಾತ್ರವಾಗಿದ್ದು, ಈ ಬಗ್ಗೆ ಡಾ.ಶಿವರಾಜ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದರು.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *