Snehapriya.com

June 9, 2025

ಪ್ರಜ್ವಲ್ ಇನ್ ಹೈದ್ರಾಬಾದ್ ಮಾಫಿಯಾ ರೋಚಕ ಚೇಸ್

Social Share :

ಅದು ರೋಚಕ ಚೇಸ್ ದೃಶ್ಯ..
ರೈಲ್ವೆ ನಿಲ್ದಾಣದಲ್ಲಿ ದುಷ್ಕರ್ಮಿಗಳನ್ನು ಹೀರೋ ಬೆನ್ನಟ್ಟುವ ಆ ದೃಶ್ಯ ನಿಜಕ್ಕೂ ಥ್ರಿಲ್ಲಿಂಗ್ ಒಳಪಡಿಸಿತು..
ಈ ಭಾವಗಳನ್ನು ಚಿತ್ರತಂಡವೇ ಅನುಭವಿಸಿತು..

ಅದು ಮಾಫಿಯಾ..!

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮುಖ್ಯ ಪಾತ್ರದಲ್ಲಿರುವ ಚಿತ್ರ ಮಾಫಿಯಾ..

ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ಅಪಾರ ವೆಚ್ಚದಲ್ಲಿ, ಅದ್ದೂರಿಯಾಗಿ ನಡೆಯಿತು. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ ಎಂದು ಚಿತ್ರತಂಡ ಹೇಳಿಕೊಂಡಿದೆ.

‘ಮಾಫಿಯಾ’ ಚಿತ್ರವು ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್.

ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಅದಾದ ಬಳಿಕ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಇದ್ದಾರೆ.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *