ಸ್ಯಾಂಡಲ್ ವುಡ್ ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹಾಗೂ ಆರ್.ಕೆ.ಚಂದನ್ ಮುಖ್ಯ ಪಾತ್ರದಲ್ಲಿರುವ ‘ಬಿಂಗೋ’ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ.
ಈ ಹಿಂದೆ ‘ಶಂಭೋ ಶಿವ ಶಂಕರ’ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ಈ ಚಿತ್ರದ ನಿರ್ದೇಶಕರು. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ.
ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಆರ್ ಕೆ ಚಂದನ್ , ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ.
ಹಿತನ್ ಹಾಸನ್ ಸಂಗೀತ ನೀಡಿದ್ದು,
ನಟರಾಜ್ ಮುದ್ದಾಲ್ ಛಾಯಾಗ್ರಹಣ, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ ಸಂಕಲನ ಚಿತ್ರಕ್ಕಿದೆ.