Snehapriya.com

December 23, 2024

ವಿಶ್ವಮಾನ್ಯ ಪಡೆದ ಉಪ್ಪಿ ಯುಐಗೆ ಪ್ರಪಂಚದಾದ್ಯಂತ 3 ಸಾವಿರ ಸ್ಕ್ರೀನ್

Social Share :

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ ನಿರ್ದೇಶನ ಮಾಡಿರುವ ಬಹು ನಿರೀಕ್ಷಿತ ‘ಯುಐ’ ಚಿತ್ರ ಪ್ರಪಂಚದ ಮೂರು ಸಾವಿರ ಪರದೆಗಳಲ್ಲಿ ಬಿಡುಗಡೆ ಕಾಣುತ್ತಿದೆ.

ಈಗಾಗಲೇ ದೇಶ ವಿದೇಶಗಳಲ್ಲಿ ಮುಂಗಡ ಟಿಕೆಟ್ ಮಾರಾಟದಲ್ಲಿ ಹೊಸ ಮೈಲುಗಲ್ಲು ಸ್ಥಾಪನೆಯಾಗಿದೆ. ಚಿತ್ರದ ಬಗ್ಗೆ ವಿಶೇಷ ಕುತೂಹಲ ಮೂಡಿ ಅದನ್ನು ನೋಡುವ ತವಕ ಅಭಿಮಾನಿಗಳಲ್ಲಿ ಮೇರೆ ಮೀರಿದೆ. ಹಾಗಾಗಿ ಚಿತ್ರತಂಡ ಖುಷಿಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದೆ.

ತಾಯಿ ಭುವನೇಶ್ವರಿ, ರಾಜರಾಜೇಶ್ವರಿ ಹಾಗೂ ಚಾಮುಂಡೇಶ್ವರಿ ಆಶೀರ್ವಾದದಿಂದ ಎಲ್ಲವೂ ಚೆನ್ನಾಗಿ ಆಗುತ್ತಿದೆ. ಮೊದಲಿನಿಂದಲೂ ನಮ್ಮ ಮೇಲೆ ತಾಯಿಯ ಆಶೀರ್ವಾದ ಇರುವಂತೆ ಈಗಲೂ ಇರುತ್ತದೆ ಎಂದರು ಲಹರಿ ಸಂಸ್ಥೆಯ ಮುಖ್ಯಸ್ಥ ಲಹರಿ ವೇಲು.

ಜನರೇ ಚಿತ್ರವನ್ನು ಹೊತ್ತು ಮೆರೆಸುತ್ತಿದ್ದಾರೆ. ಹಾಗಾಗಿ ಅಭಿಮಾನಿ ದೇವರುಗಳು ಚಿತ್ರವನ್ನು ಗೆಲ್ಲಿಸುವುದರಲ್ಲಿ ಸಂಶಯವೇ ಇಲ್ಲ ಎಂದರು.

ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ‘ಯುಐ’ ಚಿತ್ರ ಡಿಸೆಂಬರ್ 20 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 3000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ನೋಡಲು ಉಪೇಂದ್ರ ಅವರ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ‌.

ಸಿನಿಮಾ-ಗಾಸಿಪ್
Social Share :

Leave a Comment

Your email address will not be published. Required fields are marked *